Tuesday, April 13, 2021

ಸೋಂಕಿತರ ಸಂಖ್ಯೆ ಹೆಚ್ಚಳ; ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ.
ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಯಡಿ ಬರುವ 518 ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನು ಸರ್ಕಾರ ಗುರುತಿಸಿದೆ. ಬೆಂಗಳೂರು ನಗರದಲ್ಲಿ 44 ಆಸ್ಪತ್ರೆಗಳನ್ನು ಗುರುತಿಸಲಾಗಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವೆಬ್‌ಸೈಟ್‌ನಲ್ಲಿ ಖಾಸಗಿ ಆಸ್ಪತ್ರೆಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ – 19 ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ಕೊರತೆ ಇರುವ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಕಂಠೀರವ ಮತ್ತು ಕೋರಮಂಗಲ ಒಳಾಂಗಣ ಕ್ರೀಡಾಂಗಣ ಮತ್ತು ಶ್ರೀ ಶ್ರೀ ರವಿಶಂಕರ್ ಆಶ್ರಮವನ್ನು ಬಿಬಿಎಂಪಿ ಕೋವಿಡ್ -19 ಕೇರ್ ಸೆಂಟರ್ ಎಂದು ಗುರುತಿಸಿದೆ. ಸೋಂಕಿನ ಲಕ್ಷಣ ಕಂಡುಬಂದವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 16 ಸರ್ಕಾರಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆ ಎಂದು ಘೋಷಣೆ ಮಾಡಿದೆ. ಈ ಆಸ್ಪತ್ರೆಗಳಲ್ಲಿ ಒಟ್ಟು 1330 ಹಾಸಿಗೆಗಳು ಲಭ್ಯ ಇವೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!