ನವದೆಹಲಿ: ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.
ಭಾರತ ಭೇಟಿ ಕುರಿತು ಪರಿಶೀಲಿಸಲು ವಾಷಿಂಗ್ಟನ್ನಿಂದ ಭದ್ರತಾ ಹಾಗೂ ಲಾಜಿಸ್ಟಿಕ್ ತಂಡಗಳು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿವೆ.
ಟ್ರಂಪ್ ಭಾರತ ಭೇಟಿಯ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲವಾದರೂ, ಟ್ರಂಪ್ ಭಾರತ ಭೇಟಿಯ ಸಾಧ್ಯತೆಯನ್ನು ಅಮೆರಿಕದ ಅಧಿಕೃತ ಮೂಲಗಳು ಖಚಿತಪಡಿಸಿವೆ.
ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಡೋನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ಮೋದಿ ಕೋರಿದ್ದರು. ಟ್ರಂಪ್ ನಿರಾಕರಿಸಿದ್ದರು. ಆದರೆ, ತಮ್ಮ ಭಾರತ ಭೇಟಿಗೆ ಶೀಘ್ರದಲ್ಲಿಯೇ ವ್ಯವಸ್ಥೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಶ್ವೇತಭವನ ಮೂಲಗಳು ಹೇಳಿವೆ.
ಮುಂದಿನ ತಿಂಗಳು ಭಾರತಕ್ಕೆ ಟ್ರಂಪ್
Follow Us