Monday, November 29, 2021

ಒಂದೇ ದಿನ ಇಬ್ಬರ ಸಾವು, ಮೃತರ ಸಂಖ್ಯೆ 8ಕ್ಕೇರಿಕೆ

Follow Us

ಬೆಂಗಳೂರು: ಸೋಮವಾರ ಒಂದೇ ದಿನ ಕೊರೋನಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿಯ 55 ವರ್ಷದ ವ್ಯಾಪಾರಿ ಸಾವಿನ ಬಳಿಕ ಬೆಂಗಳೂರಿನ 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾಗೆ ಬಲಿಯಾದವರ ಸಂಖ್ಯೆ ಎಂಟಕ್ಕೇರಿದೆ.
ಈ ಬಗ್ಗೆ ಆರೋಗ್ಯ ಸಚಿವ ಬಿ, ಶ್ರೀರಾಮುಲು ಟ್ವೀಟ್ ಮಾಡಿದ್ದು “ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ,ಕೋವಿಡ್ ಪರೀಕ್ಷೆ ಮಾಡಲಾಗಿ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.” ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!