Saturday, April 17, 2021

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು

ಕರಾಚಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೊರೋನಾ ಸೋಂಕಿಗೆ ತುತ್ತಾಗಿದ್ದಾನೆ. ಸದ್ಯ ಕರಾಚಿಯಲ್ಲಿರುವ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ದಾವೂದ್ ಇಬ್ರಾಹಿಂ ಪತ್ನಿ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ದಾವೂದ್ ಸಹಚರರನ್ನು ಇದೀಗ  ಕ್ವಾರಂಟೈನ್ ಗೆ ಗುರಿಪಡಿಸಲಾಗಿದೆ. ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯಾಗಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ. ಪಾಕಿಸ್ತಾನದ ಐಎಸ್ಐ ದಿನದ 24 ಗಂಟೆಯೂ ಪಾತಕಿ ದಾವೂದ್ ಇಬ್ರಾಹಿಂಗೆ ರಕ್ಷಣೆ ನೀಡುತ್ತಿದೆ.  ಭಾರತ ಹುಡುಕುತ್ತಿರುವ ಪಾತಕಿಗಳ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಮೊದಲ ಸ್ಥಾನದಲ್ಲಿದ್ದಾನೆ.  ದಾವೂದ್ ಗಡೀಪಾರಿಗೆ ಭಾರತ ಒತ್ತಾಯಿಸುತ್ತಿದ್ದರೂ  ಪಾಕಿಸ್ತಾನ ಅದನ್ನು ನಿರಾಕರಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!