Tuesday, December 5, 2023

ಕೇಂದ್ರ ಸಚಿವ ಸುರೇಶ ಅಂಗಡಿ ಇನ್ನಿಲ್ಲ

Follow Us

newsics.com
ನವದೆಹಲಿ : ಕಿಲ್ಲರ್ ಕೊರೋನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ಬಲಿಯಾಗಿದ್ದಾರೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.
ಸೆ. 11ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂಗಡಿ ಅವರು ಕರೊನಾ ಸೋಂಕಿಗೆ ಬಲಿಯಾದ ಕರ್ನಾಟಕದ ಎರಡನೇ ಸಂಸದರು. ಇತ್ತೀಚೆಗಷ್ಟೆ ರಾಜ್ಯಸಭಾ ಬಿಜೆಪಿ ಸದಸ್ಯ ಅಶೋಕ್ ಗಸ್ತಿ ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ಸುರೇಶ್ ಅಂಗಡಿಯವರು ಮೇ 2019 ರಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 4 ಬಾರಿ ಲೋಕಸಭೆ ಸಂಸದರಾಗಿ ಸುರೇಶ್ ಅಂಗಡಿ ಆಯ್ಕೆಯಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!