Saturday, April 17, 2021

ಭಾರತಕ್ಕೆ 200 ವೆಂಟಿಲೇಟರ್‌ ದೇಣಿಗೆ ನೀಡಿದ ಅಮೆರಿಕ

ವಾಷಿಂಗ್ಟನ್/ ನವದೆಹಲಿ: ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ದ್ವಿಪಕ್ಷೀಯ ಸಹಕಾರವನ್ನು ವೃದ್ಧಿಗೊಳಿಸುವ ಉದ್ದೇಶದಿಂದ ಭಾರತಕ್ಕೆ 200 ವೆಂಟಿಲೇಟರ್‌ಗಳನ್ನು ನೀಡಲು ಅಮೆರಿಕ ನಿರ್ಧರಿಸಿದೆ. ಈ ಪೈಕಿ 50 ವೆಂಟಿಲೇಟರ್‌ಗಳು ಶೀಘ್ರ ಭಾರತ ತಲುಪಲಿವೆ.
ಇದು ಅಮೆರಿಕ ಸರ್ಕಾರದ ‘ದೇಣಿಗೆ’ಯಾಗಿದ್ದು, ಯಾವುದೇ ಹಣ ಪಡೆದುಕೊಳ್ಳುತ್ತಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ನ್ಯಾಷನಲ್ ಡೆವಲಪ್‌ಮೆಂಟ್ (ಯುಎಸ್‌ಎಯ್ಡ್) ನಿರ್ದೇಶಕಿ ರಮೋನ ಎಲ್‌ ಹಮ್‌ಜೌರಿ ಹೇಳಿದ್ದಾರೆ.
ಭಾರತವು ಈ ಹಿಂದೆ ಹೈಡ್ರಾಕ್ಸಿಕ್ಲೊರೋಕ್ವಿನ್ ಮಾತ್ರೆಗಳನ್ನು ಪೂರೈಸಿದ್ದಕ್ಕೆ ಪ್ರತಿಯಾಗಿ ಆ ದೇಶಕ್ಕೆ ವೆಂಟಿಲೇಟರ್ ನೀಡಲಾಗುತ್ತಿಲ್ಲ. ಉಭಯ ದೇಶಗಳ ನಡುವಿನ ಸಹಭಾಗಿತ್ವದ ದ್ಯೋತಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಮೊದಲ ಕಂತಿನಲ್ಲಿ ಭಾರತಕ್ಕೆ 50 ವೆಂಟಿಲೇಟರ್‌ಗಳನ್ನು ರವಾನಿಸಲಿದೆ. ಮುಂದಿನ ಹಂತದಲ್ಲಿ ಉಳಿದ 150 ವೆಂಟಿಲೇಟರ್‌ಗಳನ್ನು ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ. ಕೊರೋನಾ ಸೋಂಕಿನ ವಿರುದ್ಧ ಹೋರಾಟಕ್ಕೆ ಇದುವರೆಗೆ ಭಾರತಕ್ಕೆ 5.9 ಮಿಲಿಯನ್ ಡಾಲರ್ ನೆರವನ್ನು ಅಮೆರಿಕ ನೀಡಿದೆ ಎಂದೂ ಅವರು ಹೇಳಿದ್ದಾರೆ.
ಭಾರತಕ್ಕೆ ಕೊರೋನ ವೈರಸ್ ಸೋಂಕಿನ ವಿರುದ್ಧದ ಸಮರದಲ್ಲಿ 75,000 ವೆಂಟಿಲೇಟರ್‌ಗಳ ಅಗತ್ಯವಿದೆ. ಭಾರತದ ಬಳಿ 19,398 ವೆಂಟಿಲೇಟರ್‌ಗಳಿದ್ದು 60,884 ವೆಂಟಿಲೇಟರ್‌ಗಳ ಪೂರೈಕೆಗೆ ಭಾರತ ಸರ್ಕಾರ ವಿವಿಧ ದೇಶಗಳಿಗೆ ಬೇಡಿಕೆ ಸಲ್ಲಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!