ವಾಷಿಂಗ್ಟನ್: ಅಮೆರಿಕದಲ್ಲಿ ಟಿಕ್ ಟಾಕ್ ನಿಷೇಧ ಮಾಡಲಾಗಿದೆ. ಈ ಕುರಿತ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಭಾರತ ಟಿಕ್ ಟಾಕ್ ನ್ನು ನಿಷೇಧ ಮಾಡಿರುವುದನ್ನು ಟ್ರಂಪ್ ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.
ಟಿಕ್ ಟಾಕ್ ದೇಶದ ಭದ್ರತೆಗೆ ಅಪಾಯಕಾರಿ ಎಂದು ಅಮೆರಿಕ ಆರೋಪಿಸಿದೆ. ಅಮೆರಿಕ ಮತ್ತು ಚೀನಾ ನಡುವೆ ರಾಜತಾಂತ್ರಿಕ ಸಮರ ತೀವ್ರಗೊಂಡಿದ್ದು, ಈ ನಿರ್ಧಾರದಿಂದ ಅದು ಇನ್ನಷ್ಟು ವಿಕೋಪಕ್ಕೆ ಹೋಗುವ ಸಾಧ್ಯತೆಯಿದೆ.