Tuesday, April 13, 2021

ಉತ್ತರಾಖಂಡ್ ಸಿಎಂ ಸೇರಿ ಸಂಪುಟದ ಎಲ್ಲ ಸಚಿವರಿಗೆ ಕ್ವಾರಂಟೈನ್!

ನವದೆಹಲಿ: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಸಂಪುಟದ ಎಲ್ಲಾ ಸಚಿವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
ಉತ್ತರಾಖಂಡ್ ರಾಜ್ಯದ ಮುಖ್ಯ ಕಾರ್ಯದರ್ಶಿ ಉತ್ಪಾಲ್ ಕುಮಾರ್ ಸಿಂಗ್ ಈ ಮಾಹಿತಿ ನೀಡಿದ್ದಾರೆ. ಕೋವಿಡ್ – 19 ಸೋಂಕು ದೃಢವಾದ ಸಚಿವರನ್ನು ಋಷಿಕೇಶದಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮೇ 29ರ ಶುಕ್ರವಾರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಸಂಪುಟ ದರ್ಜೆ ಸಚಿವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಭಾನುವಾರ ಖಚಿತವಾಗಿದೆ.
ಸಂಪುಟ ದರ್ಜೆ ಸಚಿವರು, ಅವರ ಕುಟುಂಬ ಸದಸ್ಯರು, ಕಚೇರಿ ಸಿಬ್ಬಂದಿ ಸೇರಿದಂತೆ 22 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಭಾನುವಾರ ಖಚಿತವಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ಪಾಲ್ ಕುಮಾರ್ ಸಿಂಗ್ ಹೇಳಿದ್ದಾರೆ.
ಉತ್ತರಾಖಂಡ್ ರಾಜ್ಯದಲ್ಲಿ ಭಾನುವಾರ ಒಟ್ಟು 158 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 907. ಇದುವರೆಗೂ ರಾಜ್ಯದಲ್ಲಿ ಐವರು ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!