Saturday, November 26, 2022

ಸೆಪ್ಟೆಂಬರ್’ನಲ್ಲಿ 2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ: ಏಮ್ಸ್ ಮುಖ್ಯಸ್ಥ ವಿಶ್ವಾಸ

Follow Us

newsics.com

ನವದೆಹಲಿ: ಸೆಪ್ಟೆಂಬರ್ ವೇಳೆಗೆ ಎರಡು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನಿರೀಕ್ಷಿಸಬಹುದು ಎಂದು ದೆಹಲಿ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ತಿಳಿಸಿದ್ದಾರೆ.

ಕೋವಿಡ್-19ರ ಸರ್ಕಾರದ ಕಾರ್ಯಪಡೆಯ ಪ್ರಮುಖ ಪಲ್ಮೋನಾಲಜಿಸ್ಟ್ ಮತ್ತು ನಿರ್ಣಾಯಕ ಸದಸ್ಯರಾಗಿರುವ ಗುಲೇರಿಯಾ, ಎರಡು ಮತ್ತು ಮೂರನೇ ಹಂತದ ಪ್ರಯೋಗಗಳು ಪೂರ್ಣಗೊಂಡ ನಂತರ ಮಕ್ಕಳಿಗಾಗಿ ಕೋವ್ಯಾಕ್ಸಿನ್ ಲಸಿಕೆಯ ದತ್ತಾಂಶ ಸೆಪ್ಟೆಂಬರ್ ವೇಳೆಗೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಫೈಜರ್-ಬಯೋ ಎನ್ ಟೆಕ್ʼನ ಲಸಿಕೆಗೆ ಭಾರತದಲ್ಲಿ ಗ್ರೀನ್‌ ಸಿಗ್ನಲ್ ಪಡೆದರೆ ಅದು ಮಕ್ಕಳಿಗೆ ಆಯ್ಕೆಯಾಗಬಹುದು ಎಂದು ಅವರು ಹೇಳಿದ್ದಾರೆ.

ದೆಹಲಿ ಏಮ್ಸ್ ಈಗಾಗಲೇ ಈ ಪ್ರಯೋಗಗಳಿಗಾಗಿ ಮಕ್ಕಳನ್ನು ತಪಾಸಣೆ ಮಾಡಲು ಪ್ರಾರಂಭಿಸಿದೆ. ಮೇ 12ರಂದು ಡಿಸಿಜಿಐ ಭಾರತ್ ಬಯೋಟೆಕ್ʼಗೆ ಎರಡು ವರ್ಷದ ಮಕ್ಕಳ ಮೇಲೆ ಕೋವ್ಯಾಕ್ಸಿನ್ʼನ 2ನೇ ಹಂತ, 3ನೇ ಹಂತದ ಪ್ರಯೋಗಗಳನ್ನು ನಡೆಸಲು ಅನುಮತಿ ನೀಡಿತ್ತು ಎಂದು ಗುಲೇರಿಯಾ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!