Sunday, December 5, 2021

ಕೊರೋನಾಗೆ ಲಸಿಕೆ; ಸರ್ಕಾರದ ಅನುಮತಿ ಬಳಿಕ ಪ್ರಯೋಗ- ಡಾ.ವಿಶಾಲ್ ರಾವ್

Follow Us

ಬೆಂಗಳೂರು: ಕೊರೋನಾ ವೈರಸ್ ಮಾನವ ದೇಹದಲ್ಲಿ ಹೋಗಿ, ಅವನ ರೋಗನಿರೋಧಕ ಶಕ್ತಿಯನ್ನು ಹಾಳು ಮಾಡುವುದನ್ನು ತಡೆಗಟ್ಟಲು ಲಸಿಕೆ ಕಂಡು ಹಿಡಿಯಲಾಗಿದೆ ಎಂದು ಎಚ್‌ಸಿಜಿ ಸಮೂಹ ಆಸ್ಪತ್ರೆಗಳ ವೈದ್ಯ ಡಾ ವಿಶಾಲ್ ರಾವ್ ಹೇಳಿದ್ದಾರೆ.
ಸುದ್ದಿಸಂಸ್ಥೆಯೊಂದರ ಜತೆ ಮಾತನಾಡಿರುವ ಅವರು, ಇದಕ್ಕೆ ಇನ್ನೂ ಅಂತಿಮ ಹಸಿರು ನಿಶಾನೆ ಸಿಕ್ಕಿಲ್ಲ ಎಂದಿದ್ದಾರೆ.
ಮಾನವ ಶರೀರದಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕೊರೋನಾ ವೈರಸ್ ಕೊಂದು ಹಾಕುತ್ತದೆ. ಇದು ಮಾನವ ದೇಹದ concoction of cytokines ನ್ನು ಕೊರೋನಾ ವೈರಸ್ ಹಾಳು ಮಾಡುತ್ತದೆ. ಈ concoction of cytokines ನ್ನು ಮಾನವ ದೇಹದಲ್ಲಿ ಹೆಚ್ಚಿಸಲು ಲಸಿಕೆಯನ್ನು ಕಂಡುಹಿಡಿಯಲಾಗಿದೆ ಎಂದು ವಿಶಾಲ ರಾವ್ ಹೇಳಿದ್ದಾರೆ.
ನಮ್ಮ ಸಂಶೋಧನೆಯನ್ನು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಇದನ್ನು ಬಳಸಲು ನಾವು ಸಿದ್ದರಿದ್ದೇವೆ. ಇನ್ನೂ ಅಂತಿಮ ಮುದ್ರೆ ಸಿಕ್ಕಿಲ್ಲ. ಸರ್ಕಾರ ಇದಕ್ಕೆ ಒಪ್ಪಿಗೆ ಕೊಡುತ್ತದೆ ಎನ್ನುವ ವಿಶ್ವಾಸವಿದೆ ಎಂದು ಡಾ. ವಿಶಾಲ ರಾವ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!