newsics.com
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಮುಖ್ಯ ಕಾರ್ಯದರ್ಶಿ ರವಿ ಕುಮಾರ್.ಪಿ ಅವರು ಇದೇ ತಿಂಗಳು 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
1986ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಅವರ ಸೇವಾವಧಿ 2023ರ ನವೆಂಬರ್‌ವರೆಗೂ ಇದೆ.