ನವದೆಹಲಿ: ಗಣ್ಯ ವ್ಯಕ್ತಿಗಳ ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ತಂಡದಿಂದ ಎನ್‌ಎಸ್‌ಜಿ ಕಮಾಂಡೋಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕೇಂದ್ರದ ಈ ನಿರ್ಧಾರದಿಂದ ಸುಮಾರು 450 ಕಮಾಂಡೋಗಳನ್ನು ವಿಐಪಿ ಭದ್ರತಾ ಕಾರ್ಯದಿಂದ ಮುಕ್ತಗೊಳಿಸಲಾಗುತ್ತಿದೆ. ಅವರು ದೆಹಲಿ ಸಮೀಪದ ಗುರುಗ್ರಾಮದಲ್ಲಿನ ಮುಖ್ಯ ಕಚೇರಿ ಅಥವಾ ದೇಶದ ವಿವಿಧ ಭಾಗಗಳಲ್ಲಿನ ಐದು ಭಯೋತ್ಪಾದನಾ ನಿಗ್ರಹ ಘಟಕಗಳನ್ನು ಸೇರಿಕೊಳ್ಳಲಿದ್ದಾರೆ.
ಸುಮಾರು ಎರಡು ದಶಕಗಳ ಬಳಿಕ ವಿಐಪಿ ರಕ್ಷಣಾ ಕರ್ತವ್ಯದಿಂದ ಅತ್ಯುನ್ನತ ಭಯೋತ್ಪಾದನಾ ನಿಗ್ರಹ ದಳದ ಬ್ಲ್ಯಾಕ್ ಕ್ಯಾಟ್ ಕಮಾಂಡೋಗಳನ್ನು ಹಿಂಪಡೆಯಲಾಗುತ್ತಿದೆ. ಎನ್‌ಎಸ್‌ಜಿ ರಚನೆಯ ಉದ್ದೇಶವೇ ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆ. ಅದನ್ನು ಬಿಟ್ಟು ಬೇರೆ ಉದ್ದೇಶಕ್ಕೆ ಅವರನ್ನು ಬಳಸಿಕೊಳ್ಳಲಾಗುತ್ತಿತ್ತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ಗಣ್ಯರಿಗೆ ನೀಡಿರುವ ಎನ್‌ಎಸ್‌ಜಿಯ ಭದ್ರತೆಯನ್ನೂ ಹಿಂಪಡೆಯಲಾಗುತ್ತಿದೆ.
ವಿಐಪಿ ರಕ್ಷಣಾ ಕಾರ್ಯದಿಂದ NSG ಗೆ ಮುಕ್ತಿ
Follow Us