Thursday, December 9, 2021

ಮಧ್ಯಪ್ರದೇಶದಲ್ಲಿ ಇಂದು ವಿಶ್ವಾಸ ಮತ ಯಾಚನೆ

Follow Us

ಭೋಪಾಲ್:  ಮಧ್ಯಪ್ರದೇಶದಲ್ಲಿನ ರಾಜಕೀಯ ಹೈ ಡ್ರಾಮಾ ಇಂದು ನಿರ್ಣಾಯಕ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿವೆ. ರಾಜ್ಯಪಾಲ ಲಾಲ್ ಜಿ ಟಂಡನ್ ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಗೆ ಸೂಚನೆ ನೀಡಿದ್ದಾರೆ. ಆದರೆ ಸ್ಪೀಕರ್ ಈ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ರಾಜ್ಯಪಾಲರು ಇಂದು ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಬಳಿಕವಷ್ಟೇ ನನ್ನ ತೀರ್ಮಾನ ಪ್ರಕಟಿಸುತ್ತೇನೆ ಎಂದು ಸ್ಪೀಕರ್  ನರ್ಮದಾ ಪ್ರಸಾದ್ ಹೇಳಿದ್ದಾರೆ. ಸ್ಪೀಕರ್ , ರಾಜ್ಯಪಾಲರ ಸೂಚನೆ  ತಿರಸ್ಕರಿಸುವ ಸಾಧ್ಯತೆ ಕೂಡ ಇದೆ  ಎಂದು ಹೇಳಲಾಗುತ್ತಿದೆ.  ಒಟ್ಟು 230 ಬಲ ಹೊಂದಿರುವ ಮಧ್ಯ ಪ್ರದೇಶದಲ್ಲಿ ಪ್ರಸಕ್ತ 228 ಸದಸ್ಯರಿದ್ದಾರೆ. ಕಾಂಗ್ರೆಸ್ ನ 22 ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅತಂತ್ರ ಪರಿಸ್ಥಿತಿ ಎದುರಿಸುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!