newsics.com
ಬೆಂಗಳೂರು: ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ವಿಪರೀತ ಮಳೆಗೆ ನಲುಗಿರುವ ಕರಾವಳಿ ಭಾಗದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ಮಳೆ ಚುರುಕುಗೊಂಡಿದ್ದು, ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಲಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಕಾರಣ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.
ಸಂಭ್ರಮಾಚರಣೆಯಲ್ಲಿ ಭಾಗಿಯಾಗದ ಫಡ್ನವಿಸ್: ಅನುಮಾನ ಹುಟ್ಟಿಸಿದ ಡಿಸಿಎಂ ನಡೆ