newsics.com
ಬೆಂಗಳೂರು: ಜನರ ವ್ಯಾಪಕ ವಿರೋಧಕ್ಕೆ ಕಾರಣವಾಗಿರುವ ವೀಕೆಂಡ್ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಧ್ಯಾಹ್ನ ಒಂದು ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಈ ಸಂಬಂಧ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಹಿರಿಯ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ವೀಕೆಂಡ್ ಕರ್ಫ್ಯೂ ಬಹುತೇಕ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ.
ಬಿಜೆಪಿ ಸಂಸದರು, ಸಚಿವರು ಮತ್ತು ಶಾಸಕರು ಸರ್ಕಾರದ ವೀಕೆಂಡ್ ಕರ್ಫ್ಯೂ ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷರು ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.