Saturday, April 17, 2021

ಒಂದೇ ದಿನದಲ್ಲಿ ದೇಶದಲ್ಲಿ 9851 ಮಂದಿಗೆ ಕೊರೋನಾ ಸೋಂಕು

ನವದೆಹಲಿ: ಹತ್ತಿರ ಹತ್ತಿರ ಹತ್ತು ಸಾವಿರ ಮಂದಿಗೆ ಒಂದೇ ದಿನದಲ್ಲಿ ಕೊರೋನಾ ಸೋಂಕು ತಗುಲಿದೆ. ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 9851 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಇದುವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ  ಪ್ರಕರಣ ವರದಿಯಾಗಿತ್ತು. ಸೋಂಕಿತರ ಸಂಖ್ಯೆ ದೇಶದಲ್ಲಿ 2, 26, 770ಕ್ಕೆ ತಲುಪಿದೆ. ಇವರಲ್ಲಿ  1, 10, 960 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಕೊರೋನಾ  273 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇದೀಗ  6348ಕ್ಕೆ ತಲುಪಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!