ನವದೆಹಲಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಧಾನಿ ನವದೆಹಲಿಯಲ್ಲಿ ಬೆಳಿಗ್ಗೆ 4 ಗಂಟೆಗೆ ಮೆಟ್ರೋ ರೈಲು ಸಂಚಾರ ಆರಂಭಿಸಿತು. ಚುನಾವಣಾ ಸಾಮಾಗ್ರಿಗಳು ಮತ್ತು ಸಿಬ್ಬಂದಿಯನ್ನು ಮತಗಟ್ಟೆಗೆ ಕರೆದೊಯ್ಯಲು ಈ ವ್ಯವಸ್ಥೆ ಮಾಡಲಾಗಿತ್ತು. ದೆಹಲಿಯ ಸಾರಿಗೆ ವ್ಯವಸ್ಥೆಯಲ್ಲಿ ಮೆಟ್ರೋ ರೈಲು ಬಹು ಮುಖ್ಯ ಪಾತ್ರ ನಿರ್ವಹಿಸುತ್ತಿದೆ. ಇದರಿಂದಾಗಿ ಸರಿಯಾದ ಸಮಯಕ್ಕೆ ಸಿಬ್ಬಂದಿಗೆ ಮತ ಗಟ್ಟೆ ತಲುಪಲು ಸಾಧ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.