Saturday, April 17, 2021

ಜಮ್ಮು-ಕಾಶ್ಮೀರದಲ್ಲಿ ಪುಲ್ವಾಮಾ ಮಾದರಿ ದಾಳಿಗೆ ಉಗ್ರರ ಸಂಚು

ಭವನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಪುಲ್ವಾಮಾ‌ ಮಾದರಿಯ ದಾಳಿಗೆ ಉಗ್ರರು ಸಂಚು ರೂಪಿಸಿರುವ ಸಂಗತಿ ಬಹಿರಂಗವಾಗಿದೆ.
ರಂಜಾನ್ 17ನೇ ದಿನದಂದು ಜಮ್ಮು ಕಾಶ್ಮೀರ ಭಾಗದಲ್ಲಿ ಕಾರು ಬಾಂಬ್ ಅಥವಾ ಆತ್ಮಹತ್ಯಾ ದಾಳಿಗೆ ಉಗ್ರರು ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ.
ಕೊರೋನಾ ವೈರಸ್ ತಡೆಯುವ ಕಡೆಗೇ ದೇಶದ ಗಮನ‌ ಹೆಚ್ಚಿರುವುದರಿಂದ, ಇದೇ ಸಂದರ್ಭದಲ್ಲಿ ಜಮ್ಮು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯದ ಮೂಲಕ ಅಶಾಂತಿ ಸೃಷ್ಟಿಸಲು ಉಗ್ರ  ಸಂಘಟನೆಗಳು ಸಂಚು ರೂಪಿಸಿವೆ. ಅಲ್ಲದೆ, ಹಿಜ್ಬುಲ್ ಸಂಘಟನೆಯ ಕಮಾಂಡರ್ ನನ್ನು ಭಾರತೀಯ ಸೇನಾಪಡೆ ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿಯೂ ದಾಳಿ ನಡೆಸಲು ಉಗ್ರರು ಸ್ಕೆಚ್ ಹಾಕಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.
ಈ ಹಿನ್ನೆಲೆಯಲ್ಲಿ ಮುಂದಿನ 48ರಿಂದ 72 ಗಂಟೆಯವರೆಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚಿಸಿದೆ.
ಗುಪ್ತಚರ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಾರೀ ಬಂದೋಬಸ್ತ್ ಮಾಡಿದ್ದು, ಸೇನೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ ಎಂದು ತಿಳಿದುಬಂದಿದೆ. ಮುಂಜಾಗ್ರತಾ ಕ್ರಮವಾಗಿ ದೇಶದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!