newsics.com
ಉತ್ತರ ಪ್ರದೇಶ: ಅಪ್ರಾಪ್ತ ಬಾಲಕರೇ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ. 9 ವರ್ಷದ ಬಾಲಕಿಯ ಮೇಲೆ 10 ಹಾಗೂ 14 ವರ್ಷದ ಇಬ್ಬರು ಬಾಲಕರು ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಲಕಿ ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಇಬ್ಬರು ಹುಡುಗರು ಅವಳನ್ನು ಕರೆದೊಯ್ದು ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಎರಡು ದಿನಗಳ ಹಿಂದೆಯಷ್ಟೇ ದೂರು ದಾಖಲಾಗಿದೆ.