newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಆರ್ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ ಸ್ಥಾನದ ಅವಧಿ ಅಂತ್ಯಗೊಂಡಿರುವ ಹಿನ್ನೆಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಮುಖ್ತಾರ್ ಅಬ್ಬಾಸ್ ನಖ್ವಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿ ಹಾಗೂ ಆರ್ಸಿಪಿ ಸಿಂಗ್ ಉಕ್ಕು ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಧಾನಿ ಮೋದಿ ಈ ವೇಳೆ, ಇವರ ಅಭಿವೃದ್ಧಿ ಪರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ