Newsics. Com
ಬೆಂಗಳೂರು: ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನೇಹಾ, ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಮನರಂಜನೆ ಮತ್ತು ಟಾಸ್ಕ್ ಗಳಲ್ಲಿ ಸೈ ಎನಿಸಿಕೊಂಡಿದ್ದ ನೇಹಾಗೆ ದೊಡ್ಮನೆಯ ಆಟ ಅಂತ್ಯವಾಗಿದೆ.
ಐಶ್ವರ್ಯ, ನವಾಜ್, ದರ್ಶ್, ಮಯೂರಿ ನಂತರ ಇದೀಗ ಬಿಗ್ ಬಾಸ್ ಮನೆಯಿಂದ ನೇಹಾ ಗೌಡ ಹೊರ ಬಂದಿದ್ದಾರೆ. ಮುಂದಿನ ವಾರ ಇನ್ಯಾವ ಸ್ಪರ್ಧಿ ಹೊರಬರಬಹುದು ಎಂಬ ಕುತೂಹಲ ಈಗಾಗಲೇ ಮನೆ ಮಾಡಿದೆ. ಒಟ್ನಲ್ಲಿ ನೇಹಾ ಗೌಡ ಎಲಿಮಿನೇಷನ್ ಗೊಂಬೆ ಫ್ಯಾನ್ಸ್ ಗೆ ಶಾಕ್ ಕೊಟ್ಟಿದೆ.
ನೇಹಾ ಗೌಡ ಬಿಗ್ ಬಾಸ್ ಮನೆಯಲ್ಲಿ ಅಡುಗೆ, ಮನರಂಜನೆ, ಟಾಸ್ಕ್ ಎಲ್ಲದರಲ್ಲೂ ನೇಹಾ ಮುಂದಿದ್ದರು.