Saturday, June 10, 2023

ನೂತನ ಸಂಸತ್ ಭವನ ರಾಷ್ಟ್ರಪತಿಯವರಿಂದಲೇ ಲೋಕಾರ್ಪಣೆಯಾಗಲಿ: ಸುಪ್ರೀಂಗೆ ಮನವಿ

Follow Us

newsics.com

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ.

ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ.

ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ನೂತನ ಸಂಸತ್ತಿನ ಕಟ್ಟಡವನ್ನು ಪ್ರಧಾನ ಮಂತ್ರಿ ಉದ್ಘಾಟಿಸುವುದನ್ನು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಸತ್ಯೇಂದ್ರ ಜೈನ್‌: ಐಸಿಯುನಲ್ಲಿ ಚಿಕಿತ್ಸೆ

ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

ಮತ್ತಷ್ಟು ಸುದ್ದಿಗಳು

vertical

Latest News

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ...

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Newsics.com ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
- Advertisement -
error: Content is protected !!