newsics.com
ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ.
ಮೊದಲು ಹಂತದಲ್ಲಿ ಉಪಗ್ರಹ ಯಶಸ್ವಿಯಾಗಿ ಆಕಾಶಕ್ಕೆ ಹಾರಿತು. ಆದರೆ ಎರಡನೇ ಹಂತದಲ್ಲಿ ಉಪಗ್ರಹ ರಾಕೆಟ್‌ನಿಂದ ಬೇರ್ಪಡುವಾಗ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಅದು ಸಮುದ್ರದಲ್ಲಿ ಬಿದ್ದಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಉಪಗ್ರಹ ಪತವಾಗಿರುವುದಕ್ಕೆ ತಾಂತ್ರಿಕ ಕಾರಣಗಳನ್ನು ಪತ್ತೆ ಮಾಡಬೇಕು ಹಾಗೂ ಇನ್ನೊಂದು ಉಪಗ್ರಹ ಉಡಾವಣೆಗೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಿಮ್ ಜಾಂಗ್ ಉನ್ ಸರ್ಕಾರ ಸೂಚಿಸಿದೆ ಎಂದು ವರದಿಯಾಗಿದೆ.