newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ ಗದ್ದೆಯಲ್ಲಿ ಐದು ಹಸುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ವಿದ್ಯುತ್ ಲೈನ್ ತುಂಡಾಗಿ ಬಿದ್ದಿದೆ. ಪರಿಣಾಮ ಹಸುಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಹಸುಗಳು ವಿದ್ಯುತ್ ಸ್ಪರ್ಶದಿಂದ ಒದ್ದಾಡುತ್ತಿರುವುದನ್ನು ಕಂಡ ಮನೆಯವರು ಮತ್ತು ಸ್ಥಳೀಯರು ಕೂಡಲೇ ಕೆಇಬಿಗೆ ಕರೆಮಾಡಿ ತಿಳಿಸಿದ್ದಾರೆ. ಹಸುಗಳು ಸಾವನ್ನಪ್ಪಿದ್ದವು. ವಿದ್ಯುತ್ ಲೈನ್ ಗಳ ನಿರ್ವಹಣೆ ಮಾಡದೇ ಇರುವುದರಿಂದ ಇಂತಹ ಅವಘಡ ಸಂಭವಿಸುವುದಕ್ಕೆ ಕಾರಣವಾಗಿದೆ.