Monday, August 8, 2022

ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಿಷೇಧಾಜ್ಞೆ ಜಾರಿ

Follow Us

ಲಕ್ನೋ: ಯುವತಿಯೊಬ್ಬಳ ಸಾಮೂಹಿಕ ಅತ್ಯಾಚಾರ ನಡೆದ ಉತ್ತರಪ್ರದೇಶದ ಹತ್ರಾಸ್ ನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಘಟನೆ ಖಂಡಿಸಿ ವಿವಿಧ ಸಂಘಟನೆಗಳು ಭಾರೀ ಪ್ರತಿಭಟನೆಗೆ ಸಿದ್ದತೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ  ಪಿ . ಲಕ್ಷಕರ್ ಅವರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಯುವತಿಯ ಹೆತ್ತವರನ್ನು ಇಂದು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರಿಯಾಂಕಾ ಗಾಂಧಿ ಅವರ  ಭೇಟಿಯ ಕುರಿತಂತೆ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ದೊರೆತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇದೇ ವೇಳೆ ಯುವತಿಯ ಅತ್ಯಾಚಾರ  ಖಂಡಿಸಿ ದೆಹಲಿ ಸೇರಿದಂತೆ ಉತ್ತರ ಭಾರತದ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!