Saturday, June 10, 2023

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Follow Us

newsics.com

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಶುಕ್ರವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ.ಇರಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ತಲುಪಲಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ದೇಶದ ಹಲವೆಡೆ ಇಂದಿನಿಂದ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರ ಆರಂಭ

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!