Monday, August 8, 2022

ಮೊರೋಟೊರಿಯಂ ಅವಧಿಯ ಸಾಲದ ಮೇಲಿನ ಬಡ್ಡಿ ವಸೂಲಿ: ವಿಚಾರಣೆ ಮುಂದೂಡಿಕೆ

Follow Us

ನವದೆಹಲಿ: ದೇಶದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಘೋಷಿಸಲಾಗಿದ್ದ  ಸಾಲ ವಸೂಲಿ ನಿರ್ಬಂಧ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಲಾಕ್ ಡೌನ್ ಅವಧಿಯಲ್ಲಿನ ಸಾಲದ ಮೇಲೆ ಬಡ್ಡಿ ವಸೂಲು ಮಾಡುತ್ತಿರುವುದನ್ನು  ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಅಕ್ಟೋಬರ್ 5ರಂದು ಈ ಕುರಿತು ಸಮಗ್ರ ವರದಿ ಸಲ್ಲಿಸುವಂತೆ  ಸರ್ವೋಚ್ಚ ನ್ಯಾಯಾಲಯ, ಕೇಂದ್ರ ಸರ್ಕಾರ ಮತ್ತು ಆರ್ ಬಿ ಐ ಗೆ ಆದೇಶ ನೀಡಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ , ಮಾತುಕತೆ  ಪ್ರಗತಿ ಹಂತದಲ್ಲಿದೆ. ಇದನ್ನು ಅಂತಿಮಪಡಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮನವಿಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠ, ಅಕ್ಟೋಬರ್ 5ರಂದು ಸಮಗ್ರ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ರಾಜೀವ್ ದತ್ತ್ ಅವರು ಇದನ್ನು ವಿರೋಧಿಸಿದರು. ಶೀಘ್ರವೇ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಅವರು ಮನವಿ ಮಾಡಿದರು.

ಅಂತಿಮವಾಗಿ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿತು. ಸೆಪ್ಟೆಂಬರ್ 10ರಂದು ತೀರ್ಪು ನೀಡಿದ್ದ ನ್ಯಾಯಾಲಯ ಸೆಪ್ಟೆಂಬರ್ 28ರ ವರೆಗೆ ಸಾಲ ವಸೂಲಾತಿಯ  ನಿರ್ಬಂಧ ವಿಸ್ತರಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!