Saturday, June 10, 2023

ಪತ್ನಿ ಜತೆ ಅಕ್ರಮ ಸಂಬಂಧ ಶಂಕೆ: ಸ್ನೇಹಿತನ ಕೊಲೆ ಮಾಡಿದ ಪತಿ

Follow Us

newsics.com

ಚಿಕ್ಕಬಳ್ಳಾಪುರ: ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಮೇರೆಗೆ ವ್ಯಕ್ತಿಯೊಬ್ಬ ಸ್ನೇಹಿತನನ್ನು ಪಾರ್ಟಿಗೆ ಕರೆದು ಕೊಲೆ ಮಾಡಿರುವ ಘಟನೆ ದೇವನಹಳ್ಳಿಯ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಪ್ರದೀಪ್ ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಹಾಗೂ ನಾಗೇಶ್ ಕೊಲೆ ಮಾಡಿದ ಆರೋಪಿಗಳು. ವೆಂಕಟೇಶ್ ಹಾಗೂ ಪ್ರದೀಪ್ ಇಬ್ಬರು ಸ್ನೇಹಿತರು. ಮನೆಗೆ ಬಂದು ಹೋಗುತ್ತಿದ್ದ ಪ್ರದೀಪ್, ಆರೋಪಿ ವೆಂಕಟೇಶ್ ಹೆಂಡತಿ ಜತೆ ಚಾಟಿಂಗ್ ಮಾಡುತ್ತಿದ್ದ. ಇದೇ ವಿಚಾರವಾಗಿ ಹಲವು ಬಾರಿ ವೆಂಕಟೇಶ್, ಪ್ರದೀಪ್‍ನಿಗೆ ವಾರ್ನಿಂಗ್ ಮಾಡಿದ್ದ. ಕಳೆದ ತಿಂಗಳು ಈ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ವಿಶ್ವನಾಥಪುರ ಪೊಲೀಸರು ಇಬ್ಬರನ್ನು ಕರೆಸಿ ಬುದ್ಧಿವಾದ ಹೇಳಿ ಕಳಿಸಿದ್ದರು.

ಆದರೆ ಇಷ್ಟೆಲ್ಲ ನಡೆದ ಮೇಲೂ ಪ್ರದೀಪ್ ಮತ್ತೆ ಮತ್ತೆ ಕಾಲ್ ಹಾಗೂ ಮೆಸೇಜ್ ಮಾಡುತ್ತಿದ್ದ. ಇದೇ ಕಾರಣಕ್ಕೆ ಕಳೆದ ರಾತ್ರಿ ಪಾರ್ಟಿ ಮಾಡುವುದಾಗಿ ಗ್ರಾಮದ ಪಕ್ಕದ ಬಡಾವಣೆಯೊಂದಕ್ಕೆ ಕರೆಸಿಕೊಂಡಿದ್ದಾನೆ. ಈ ವೇಳೆ ಸ್ನೇಹಿತ ನಾಗೇಶನ ಜತೆ ಸೇರಿ ಪ್ರದೀಪ್ ಮೇಲೆ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಇತ್ತ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದ ಪ್ರದೀಪ್, ಜೀವ ಉಳಿಸಿಕೊಳ್ಳಲು ಒಂದು ಕಿಲೋ ಮೀಟರ್ ಓಡಿ ಬಂದಿದ್ದಾನೆ. ಆದರೆ ಮನೆಯ ಬಳಿ ಬರುತ್ತಿದ್ದಂತೆ ಕಿರುಚಾಡಿಕೊಂಡು ಕುಸಿದು ಬಿದ್ದಿದ್ದಾನೆ. ಇದನ್ನು ಕಂಡು ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆತನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಇಬ್ಬರು ಆರೋಪಿಗಳನ್ನು ವಿಶ್ವನಾಥಪುರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬೈಕ್ ಅಪಘಾತ: ಕಾಫಿನಾಡಿನ NSG ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವು

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!