newsics.com
ಚಿಕ್ಕೋಡಿ: ನಿಪ್ಪಾಣಿ ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕಾರಣ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ ಎದುರಲ್ಲೇ ಬಿಜೆಪಿ ಚಿಹ್ನೆ ಹಾಗೂ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಅವರ ಫೋಟೋ ಬಳಕೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ 4-5 ಸಾವಿರ ಮಹಿಳೆಯರು ಭಾಗವಹಿಸಿದ್ದು, ಶಶಿಕಲಾ ಜೊಲೆ ಕೂಡಾ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗಿರುವ ಹಿನ್ನೆಲೆ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ.