ಜೈಪುರ: ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ಹೆಣ್ಣು ಹುಲಿಯೊಂದು ಸಫಾರಿಗೆ ಆಗಮಿಸಿದ್ದ ಪ್ರವಾಸಿಗರನ್ನೇ ಅಟ್ಟಾಡಿಸಿದೆ.
ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹುಲಿಯನ್ನು ಕೋಡ್ ಟಿ-107 ಮೂಲಕ ಸುಲ್ತಾನಾ ಎಂದು ಗುರುತಿಸಲಾಗಿದೆ.
ಪ್ರವಾಸಿಗ ಪರಾಗ್ ಠಾಕೂರ್ ಎಂಬುವರು ತಮ್ಮ ಟ್ವಿಟರ್ನಲ್ಲಿ ಈ ವಿಡಿಯೋ ಲೋಡ್ ಮಾಡಿದ್ದು, ವಿಡಿಯೋವನ್ನು ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ.