ಕ್ಯಾಲಿಫೋರ್ನಿಯಾ: ಗೂಗಲ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಂದರ್ ಪಿಚೈ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. , ಗೂಗಲ್ ಮಾತೃ ಸಂಸ್ಥೆ ಅಲ್ಫಾಬೆಟ್ ಮುಖ್ಯಸ್ಥರಾಗಿ ಅವರನ್ನು ನೇಮಕ ಮಾಡಲಾಗಿದೆ. ಗೂಗಲ್ ಸಹ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸರ್ಗೆ ಬಿನ್ ಅಲ್ಫಾಬೆಟ್ಗೆ ಗುಡ್ ಬೈ ಹೇಳಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ.
ಮುಖ್ಯವಾಗಿ ಕೃತಕ ಬುದ್ಧಿಮತ್ತೆ ಕುರಿತ ಸಂಸ್ಥೆಯ ಚಟುವಟಿಕೆಗಳಿಗೆ ಪಿಚ್ಚೈ ನೇತೃತ್ವ ನೀಡಲಿದ್ದಾರೆ.
:ತಮಿಳುನಾಡಿನ ಚೆನ್ನೈ ಮೂಲದವರಾಗಿರುವ ಪಿಚೈ ಇಂದು ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಪ್ರತಿಮ ಸಾಧಕರಲ್ಲಿ ಒಬ್ಬರಾಗಿದ್ದಾರೆ.