ಇಸ್ಲಾಮಾಬಾದ್: ಬಲೂಚಿಸ್ತಾನ ರಾಜಧಾನಿ ಕ್ವೆಟ್ಟಾದ ಮಸೀದಿಯೊಂದರಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡ ಪರಿಣಾಮ 15 ಜನ ಸಾವಿಗೀಡಾಗಿದ್ದಾರೆ.
ಮೃತಪಟ್ಟವರಲ್ಲಿ ಮಸೀದಿಯ ಗುರು, ಒಬ್ಬ ಪೊಲೀಸ್ ಅಧಿಕಾರಿ ಸೇರಿದ್ದಾರೆ. ಬಾಂಬ್ ಸ್ಫೋಟದಿಂದ ಹಲವರು ತೀವ್ರ ಗಾಯಗೊಂಡಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಮೂರು ದಿನಗಳ ಹಿಂದಷ್ಟೇ ಕ್ವೆಟ್ಟಾದ ರಕ್ಷಣಾ ದಳದ ವಾಹನವೊಂದರ ಮೇಲೆ ನಡೆಸಲಾಗಿದ್ದ ಬಾಂಬ್ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು.
ಪಾಕ್ ಮಸೀದಿಯಲ್ಲಿ ಬಾಂಬ್ ಸ್ಫೋಟ; 15 ಮಂದಿ ಸಾವು
Follow Us