
ಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ಮುಖ್ಯಸ್ಥರ ಅವಧಿಯನ್ನು ಮೂರು ವರ್ಷಗಳಿಗೆ ವಿಸ್ತರಿಸಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿರಿಸಿ ಅಲ್ಲಿನ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸೇನಾ ಮುಖ್ಯಸ್ಥ ಖ್ವಾಮರ್ ಜಾವೇದ್ ಬಜ್ವಾ ಅಧಿಕಾರಾವಧಿ ವಿಸ್ತರಣೆ ಪ್ರಶ್ನಿಸಿ ಜಸ್ಟೀಸ್ ಫೌಂಡೇಷನ್ ಮೇಲ್ಮನವಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಸೀಫ್ ಸಯೀದ್ ಖೋಸಾ ನೇತೃತ್ವದ ಪೀಠ, ಸೇನಾ ಮುಖ್ಯಸ್ಥ ಸೇವೆ ವಿಸ್ತರಿಸುವ ಅಧಿಕಾರವಿರುವುದು ರಾಷ್ಟ್ರಾಧ್ಯಕ್ಷರಿಗೆ ಮಾತ್ರ ಎಂದು ಅಭಿಪ್ರಾಯಪಟ್ಟಿದೆ.