ಇಸ್ಲಮಾಬಾದ್: ಭಾರತದ ಪೌರತ್ವ ಮಸೂದೆ ಜಾರಿಗೆ ಲೋಕಸಭೆಯಲ್ಲಿ ಸಮ್ಮತಿ ಸಿಕ್ಕಿರುವುದಕ್ಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಇಮ್ರಾನ್, ಈ ಮಸೂದೆ ಮಾನವ ಹಕ್ಕುಗಳ ಎಲ್ಲ ಕಾನೂನುಗಳನ್ನು, ಮತ್ತು ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ನಿಯಮವನ್ನು ಉಲ್ಲಂಘನೆ ಮಾಡುತ್ತದೆ ಎಂದಿದ್ದಾರೆ.
ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಖಂಡಿಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ಅನ್ವಯ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡಬಹುದಾಗಿದೆ. ಆದರೆ ಮಸೂದೆ ವ್ಯಾಪ್ತಿಯಿಂದ ಮುಸ್ಲಿಮರನ್ನು ಹೊರಗಿಡಲಾಗಿದೆ ಎಂದು ಇಮ್ರಾನ್ ಆಕ್ರೋಶ ಹೊರಹಾಕಿದ್ದಾರೆ.
ಪೌರತ್ವ ತಿದ್ದುಪಡಿ ಆರ್ಎಸ್ಎಸ್ನ ಹಿಂದು ರಾಷ್ಟ್ರ ವಿಸ್ತರಣಾವಾದದ ಒಂದು ಭಾಗ ಎಂದು ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.
ಭಾರತದ ಪೌರತ್ವ ಮಸೂದೆಗೆ ಪಾಕ್ ಕಿಡಿ
Follow Us