Monday, November 29, 2021

ವಿದೇಶಾಂಗ ಸಚಿವ ಜೈ ಶಂಕರ್ ದಿಢೀರ್ ಲಂಕಾ ಭೇಟಿ

Follow Us

ಶ್ರೀಲಂಕಾದಲ್ಲಿ ನೂತನ ಅಧ್ಯಕ್ಷರಾಗಿ ಗೋಟಾಬಯ ರಾಜಪಕ್ಸೇ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಭಾರತ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ. ವಿದೇಶಾಂಗ ಸಚಿವ ಜೈ ಶಂಕರ್ ದಿಡೀರ್ ಕೊಲಂಬೊಕ್ಕೆ ಬೇಟಿ ನೀಡಿದ್ದಾರೆ. ನೂತನ ಅಧ್ಯಕ್ಷ ಗೋಟಾಬಯ್ ಚೀನಾದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. ಇದು ಭಾರತದ ಕಳವಳಕ್ಕೆ ಕಾರಣವಾಗಿದೆ. ಶ್ರೀಲಂಕಾ ಮತ್ತು ಚೀನಾ ಮಧ್ಯೆ ಹೆಚ್ಚಿನ ರಕ್ಷಣಾ ಸಹಕಾರ ಭಾರತದ ಮೇಲೆ ನೇರ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಚೀನಾದ  ಪ್ರಭಾವದಿಂದ ಶ್ರೀಲಂಕಾವನ್ನು ರಕ್ಷಿಸುವುದೇ ಭಾರತದ ಮೊದಲ ಆದ್ಯತೆಯಾಗಿದೆ. ನವೆಂಬರ್ 29ರಂದು ಶ್ರೀಲಂಕಾದ ನೂತನ ಅಧ್ಯಕ್ಷ  ಗೋಟಾಬಯ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!