Saturday, April 17, 2021

ಅಮೆರಿಕದಲ್ಲಿ ಕೊರೋನಾಗೆ 1.28 ಲಕ್ಷ ಮಂದಿ ಬಲಿ!

ವಾಷಿಂಗ್ಟನ್/ ನ್ಯೂಯಾರ್ಕ್: ಜಗತ್ತಿನ ಮಹಾ ಶಕ್ತಿಶಾಲಿ ದೇಶ ಎನಿಸಿರುವ ಅಮೆರಿಕ ಕೊರೋನಾ ಸೋಂಕು ಮತ್ತು ಸಾವಿನಲ್ಲೂ ಮೊದಲ ಸ್ಥಾನದಲ್ಲಿದೆ.
ಮಾರಕ ಕೋವಿಡ್-19 ವೈರಸ್ ದಾಳಿಯಿಂದ ತತ್ತರಿಸಿರುವ ಅಮೆರಿಕದಲ್ಲಿ ಮೃತರ ಸಂಖ್ಯೆ 1.28 ಲಕ್ಷ ಹಾಗೂ ರೋಗಪೀಡಿತರ ಸಂಖ್ಯೆ 25.53 ಲಕ್ಷ ದಾಟಿದೆ.
ಸುಮಾರು 16,000 ರೋಗಿಗಳ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಮುಂದುವರಿದಿದೆ. ಅಮೆರಿಕದಲ್ಲಿ ಈವರೆಗೆ ಸುಮಾರು 10,68,703 ಕೊರೋನಾ ಸೋಂಕು ರೋಗಿಗಳು ಗುಣಮುಖರಾಗಿದ್ದಾರೆ.
ಕೊರೋನಾ ಸಾವು ಹಾಗೂ ಸೋಂಕಿನಲ್ಲಿ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಬ್ರೆಜಿಲ್’ನಲ್ಲಿ ಸುಮಾರು 12.80 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 56,109ಕ್ಕೇರಿದೆ. ನಂತರದ ಸ್ಥಾನಗಳಲ್ಲಿ ರಷ್ಯಾ, ಭಾರತ ಮತ್ತು ಬ್ರಿಟನ್ ದೇಶಗಳಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!