Tuesday, April 13, 2021

ಪಾಕಿಸ್ತಾನದಲ್ಲಿ ಒಂದೇ ದಿನ 36 ಮಂದಿ ಸಾವು, 1841 ಮಂದಿಗೆ ಸೋಂಕು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಒಂದೇ ದಿನ 1841 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, 36 ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 44,000 ದಾಟಿದ್ದು, 939 ಜನರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈವರೆಗೆ ಒಟ್ಟು 12,489 ರೋಗಿಗಳು ವೈರಸ್‌ನಿಂದ ಚೇತರಿಸಿಕೊಂಡಿದ್ದರೆ ಎಂದು ಮಂಗಳವಾರ ಪಾಕಿಸ್ತಾನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಸ್ಲಾಮಾಬಾದ್ ನಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈವರೆಗೆ ಸಿಂಧ್‌ನಲ್ಲಿ 17,241, ಪಂಜಾಬ್‌ನಲ್ಲಿ 15,976, ಖೈಬರ್‌ನಲ್ಲಿ 6,230, ಬಲೂಚಿಸ್ತಾನದಲ್ಲಿ 2,820, ಇಸ್ಲಾಮಾಬಾದ್‌ನಲ್ಲಿ 1,034, ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ 550 ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 115 ಪ್ರಕರಣಗಳು ಪತ್ತೆಯಾಗಿವೆ.
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ಪ್ರಾರ್ಥನೆ ಮಾಡಲು ಷರತ್ತು ವಿಧಿಸಿ ಅವಕಾಶ ಮಾಡಿಕೊಡಲಾಗಿದೆ. ಪ್ರಾರ್ಥನಾ ಸಮಯದಲ್ಲಿ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಸರ್ಕಾರ ಸೂಚಿಸಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!