Wednesday, October 5, 2022

ಮೊಜಾಂಬಿಕ್ ಕ್ರೀಡಾಂಗಣದಲ್ಲಿ ಉಗ್ರರಿಂದ 50 ಮಂದಿಯ ಬರ್ಬರ ಹತ್ಯೆ

Follow Us

Newsics.com

ಈಜಿಫ್ಟ್: ಮೊಜಾಂಬಿಕ್ ಕ್ರೀಡಾಂಗಣದಲ್ಲಿ ಉಗ್ರರು 50ಕ್ಕೂ ಹೆಚ್ಚು ಮಂದಿಯ ಶಿರಚ್ಛೇಧ ಮಾಡಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಗೆ ಸೇರಿದ ಉಗ್ರರು ಈ ಕೃತ್ಯ ಎಸಗಿದ್ದಾರೆ. ಅನಿಲ ಸಂಪತ್ತಿಗೆ ಹೆಸರುವಾಸಿಯಾಗಿರುವ  ಉತ್ತರ ಮೊಜಾಂಬಿಕ್ ನ ಕಾಬೋ ಡೆಲ್ ಗಾಡೋ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

2017ರಿಂದ ಇಲ್ಲಿ ಉಗ್ರರ ಹಾವಳಿ ಹೆಚ್ಚಾಗಿದೆ. ಇದುವರೆಗೆ ಭಯೋತ್ಪಾದಕರ ದಾಳಿಯಿಂದ 2000ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಐದು ಲಕ್ಷಕ್ಕೂ ಮಂದಿ ತಮ್ಮ ಮನೆ ಮಠ ಕಳೆದುಕೊಂಡಿದ್ದಾರೆ.

ತಾಲಿಬಾನ್ ಮಾದರಿಯ ಆಡಳಿತವನ್ನು ಇಲ್ಲಿ ಹೇರಲು ಇಸ್ಲಾಮಿಕ್ ಸ್ಟೇಟ್ ಸಂಘಟನೆಗೆ ಸೇರಿದ ಉಗ್ರರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಸ್ಥಳೀಯರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ.

ಮುಗ್ಧ ನಾಗರಿಕರನ್ನು ಕ್ರೀಡಾಂಗಣದಲ್ಲಿ ಬಂಧಿಮಾಡಿದ ಉಗ್ರರು , ಎಲ್ಲರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!