Wednesday, October 5, 2022

ಎಂಟು ಮಕ್ಕಳ ಹತ್ಯೆ ಆರೋಪ: ನರ್ಸ್ ಬಂಧನ

Follow Us

Newsics.com

ಲಂಡನ್: ಎಂಟು ಶಿಶುಗಳ  ಹತ್ಯೆ ಮತ್ತು  10 ಶಿಶುಗಳ ಹತ್ಯಾ ಯತ್ನ  ಆರೋಪದ ಹಿನ್ನೆಲೆಯಲ್ಲಿ ಲಂಡನ್ ನಲ್ಲಿ ನರ್ಸ್ ಒಬ್ಬರನ್ನು ಬಂಧಿಸಲಾಗಿದೆ. ಬಂಧಿತ ನರ್ಸ್  ಲೂಸಿ ಲ್ಯಾಬಿ ವಿರುದ್ದ ಕಾನೂನು ಕ್ರಮಕ್ಕೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬಳಿಕ ಅವರನ್ನು ಬಂಧಿಸಲಾಗಿದೆ.

ಬ್ಟಿಟನ್ ನ ಚೆಸ್ಟರ್ ನಗರದಲ್ಲಿ ಈ ಘಟನೆ ವರದಿಯಾಗಿದೆ.  2015ರಿಂದ 2016 ಜೂನ್ ತಿಂಗಳ ಮಧ್ಯೆ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿ ನರ್ಸ್ ಲೂಸಿಯನ್ನು ಇದೀಗ ಬಂಧಿಸಲಾಗಿದೆ.  2018ರಲ್ಲಿ  ಕೂಡ ನರ್ಸ್ ಲೂಸಿಯನ್ನು ಬಂಧಿಸಲಾಗಿತ್ತು. ಆದರೆ ಸೂಕ್ತ ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ಅವರನ್ನು ಬಂಧ ಮುಕ್ತಗೊಳಿಸಲಾಗಿತ್ತು.

ನರ್ಸ್ ಅವರ ಕರ್ತವ್ಯ ಲೋಪದಿಂದಾಗಿ ಶಿಶುಗಳು ಸಾವನ್ನಪ್ಪಿವೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!