Thursday, December 9, 2021

ಯುಎಇಯಿಂದ ಮರಳಲು 32 ಸಾವಿರ ಭಾರತೀಯರ ನೋಂದಣಿ!

Follow Us

ದುಬೈ: ಕೊರೋನಾ ಆತಂಕದಿಂದ ವಿದೇಶದಲ್ಲಿರುವ ಬಹುತೇಕರಿಗೆ ಸ್ವದೇಶಕ್ಕೆ ಮರಳುವ ತವಕ.
ಯುಎಇಯಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರೂ ಸ್ವದೇಶಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಭಾರತೀಯ ದೂತಾವಾಸಗಳು ಇ-ರಿಜಿಸ್ಟ್ರೇಶನ್ ಆರಂಭಿಸಿದ ಕೇವಲ 12 ಗಂಟೆಗಳಲ್ಲಿ ಸುಮಾರು 9,000 ಭಾರತೀಯರು ತಮ್ಮ ಹೆಸರು ನೋಂದಾಯಿಸಿದ್ದಾರೆ. ಈವರೆಗೆ 32 ಸಾವಿರ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ.
ಹೆಸರು ನೋಂದಾಯಿಸಲು ಮುಗಿಬಿದ್ದ ಹಿನ್ನೆಲೆಯಲ್ಲಿ ವೆಬ್‌ಸೈಟ್ ಹಲವು ಬಾರಿ ಸ್ಥಗಿತಗೊಂಡಿತು. ತಾಂತ್ರಿಕ ದೋಷಗಳ ಹೊರತಾಗಿಯೂ ಸುಮಾರು 9.000 ಮಂದಿ ತಮ್ಮ ವಿವರಗಳನ್ನು ನೋಂದಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದುಬೈಯಲ್ಲಿರುವ ಭಾರತೀಯ ಕೌನ್ಸುಲ್ ಜನರಲ್ ವಿಪುಲ್ ಗಲ್ಫ್ ನ್ಯೂಸ್‌ಗೆ ತಿಳಿಸಿದ್ದಾರೆ.
ಕಾರ್ಮಿಕರು, ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರುವವರು, ಗರ್ಭಿಣಿಯರು, ಹಿರಿಯರು ಮತ್ತು ದುಬೈ ವಿಮಾನ ನಿಲ್ದಾಣದಲ್ಲಿ ಸಿಕ್ಕಿಹಾಕಿಕೊಂಡಿರುವವರನ್ನು ಆದ್ಯತೆಯ ಮೇಲೆ ಭಾರತಕ್ಕೆ ಕಳುಹಿಸಲಾಗುವುದು ಎಂದು ವಿಪುಲ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!