Saturday, April 17, 2021

ಚೀನಾದ ದಬ್ಬಾಳಿಕೆಯನ್ನು ಕೊನೆಗೊಳಿಸಬೇಕು: ಅಮೆರಿಕ ಅಭಿಮತ

ವಾಷಿಂಗ್ಟ್ ನ್: ವಿಶ್ವದಲ್ಲಿ ಚೀನಾದ ದಬ್ಬಾಳಿಕೆಯನ್ನು ಕೊನೆಗೊಳಿಸಬೇಕಾದ ಸಮಯ ಬಂದಿದೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ. ಈ ಸಂಬಂಧ ಅಗತ್ಯ ಇರುವ ಎಲ್ಲ ಕ್ರಮ ತೆಗೆದುಕೊಳ್ಳುವುದಾಗಿ ಅಮೆರಿಕ ಹೇಳಿದೆ. ಚೀನಾದ ಆಕ್ರಮಣಕಾರಿ ನೀತಿ ಹಿನ್ನೆಲೆಯಲ್ಲಿ ಯುರೋಪ್ ನಲ್ಲಿ ಇರುವ  ತನ್ನ ಸೇನೆಯನ್ನು ಮರು ನಿಯೋಜಿಸುವುದಾಗಿ ಕೂಡ ಅಮೆರಿಕ ಘೋಷಿಸಿದೆ. ಭಾರತ- ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಅಮೆರಿಕ ತಳೆದಿರುವ ಈ ನಿಲುವು ಕುತೂಹಲ ಕೆರಳಿಸಿದೆ.  ಅಮೆರಿಕ ಗಡಿ ತಂಟೆ ವಿಚಾರದಲ್ಲಿ ಭಾರತಕ್ಕೆ ಬೆಂಬಲ ಸೂಚಿಸಿದೆ. ಅಮೆರಿಕ ನೇರವಾಗಿ ಚೀನಾ ವಿರುದ್ಧ ವಾಗ್ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಬಿಕ್ಕಟ್ಟು ಇನ್ನಷ್ಟು  ಗಂಭೀರ  ಸ್ವರೂಪ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!