ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿ ಸಂದರ್ಭದಲ್ಲಿ ಪ್ರಮುಖ ವಾಣಿಜ್ಯ ಒಪ್ಪಂದಗಳಿಗೆ ಸಹಿ ಹಾಕುವ ವಿಶ್ವಾಸವನ್ನು ಅಮೆರಿಕ ವ್ಯಕ್ತಪಡಿಸಿದೆ. ಈ ಮೊದಲು ಪ್ರವಾಸದ ಸಂದರ್ಭದಲ್ಲಿ ವ್ಯಾಪಾರ ಒಪ್ಪಂದದ ಸಾಧ್ಯತೆ ತೀರಾ ಕಡಿಮೆ ಎಂದು ವರದಿಯಾಗಿತ್ತು. ಮುಖ್ಯವಾಗಿ ಕ್ಷಿಪಣಿ ನಿರೋಧಕ ವ್ಯವಸ್ಥೆ ಸೇರಿದಂತೆ ರಕ್ಷಣೆಗೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಲು ಅಮೆರಿಕ ಉತ್ಸುಕವಾಗಿದೆ. ಭಾರತದ ರಕ್ಷಣಾ ಮಾರುಕಟ್ಟೆ ಅಮೆರಿಕದ ಪ್ರಮುಖ ಆಸಕ್ತಿದಾಯಕ ವಿಷಯವಾಗಿದೆ. ಈ ಮಧ್ಯೆ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ದೇಶದ ಖ್ಯಾತ ಚಿತ್ರ ತಾರೆಯರು ಮತ್ತು ಕ್ರೀಡಾಳುಗಳು ಭಾಗವಹಿಸುವುದು ಬಹುತೇಕ ಖಚಿತವಾಗಿದೆ.