Tuesday, April 13, 2021

ವಿಶ್ವ ಆರೋಗ್ಯ ಸಂಘಟನೆಯೊಂದಿಗಿನ ಸಂಬಂಧ ಕಡಿದುಕೊಂಡ ಅಮೆರಿಕ

ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಘಟನೆಯೊಂದಿಗಿನ ಎಲ್ಲ ಸಂಬಂಧವನ್ನು ಕಡಿದುಕೊಳ್ಳುವುದಾಗಿ ಅಮೆರಿಕ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಈ ಘೋಷಣೆ ಮಾಡಿದ್ದಾರೆ. ವಿಶ್ವ ಆರೋಗ್ಯ ಸಂಘಟನೆ ಕೇವಲ ಚೀನಾದ ಹಿತಾಸಕ್ತಿ ಮಾತ್ರ ರಕ್ಷಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅದರಲ್ಲಿ ಮುಂದುವರಿಯುವುದರಲ್ಲಿ ಏನು ಅರ್ಥವಿಲ್ಲ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.  ಅಮೆರಿಕ ವಿಶ್ವ ಆರೋಗ್ಯ ಸಂಘಟನೆಗೆ ಚೀನಾಕ್ಕಿಂತ ಹತ್ತು ಪಟ್ಟು ಹಣ ನೀಡುತ್ತಿದೆ. ಆದರೂ ಅಲ್ಲಿ ಚೀನಾದ ಮಾತು ಮಾತ್ರ ನಡೆಯುತ್ತಿದೆ ಎಂದು ಟ್ರಂಪ್ ಗುಡುಗಿದ್ದಾರೆ.  ಚೀನಾ 40 ಮಿಲಿಯನ್ ಡಾಲರ್ ಹಣ ದೇಣಿಗೆ ನೀಡುತ್ತಿದ್ದರೆ ಅಮೆರಿಕ 450 ಮಿಲಿಯನ್ ಡಾಲರ್ ಹಣ ಕೊಡುಗೆಯಾಗಿ ನೀಡುತ್ತಿದೆ. ಆದರೂ ತಾರತಮ್ಯ ಎಸಗಲಾಗುತ್ತಿದೆ ಎಂದು ಟ್ರಂಪ್  ಟೀಕಿಸಿದ್ದಾರೆ. ವಿಶ್ವ ಆರೋಗ್ಯ ಸಂಘಟನೆಗೆ ಮೀಸಲಿರಿಸಲಾಗಿದ್ದ ಹಣವನ್ನು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಲು ಅಮೆರಿಕ ನಿರ್ಧರಿಸಿದೆ ಎಂದು ಟ್ರಂಪ್ ಘೋಷಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!