Monday, April 12, 2021

ಕೊರೋನಾ ಎಫೆಕ್ಟ್ : ಬ್ರೆಜಿಲ್ ಪ್ರವಾಸಿಗರಿಗೆ ಅಮೆರಿಕ ನಿರ್ಬಂಧ

ವಾಷಿಂಗ್ಟ್ ನ್: ಬ್ರೆಜಿಲ್ ನಲ್ಲಿ ಮಾರಕ ಕೊರೋನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ  ಬ್ರೆಜಿಲ್ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಎಲ್ಲ ವಿಮಾನ ನಿಲ್ದಾಣಗಳಲ್ಲಿ ಕಟ್ಟು ನಿಟ್ಟಾಗಿ  ಇದನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಆದೇಶ ಹೊರಡಿಸಿದ್ದಾರೆ. ಆದರೆ ಅಮೆರಿಕದ ನಾಗರಿಕರಿಗೆ, ಗ್ರೀನ್ ಕಾರ್ಡ್ ಹೊಂದಿರುವವರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಕೊರೋನಾ ಬ್ರೆಜಿಲ್ ನಲ್ಲಿ  23,000 ಮಂದಿಯನ್ನು ಬಲಿ ಪಡೆದಿದೆ. ಅಮೆರಿಕದಲ್ಲಿ ಕೂಡ ಪರಿಸ್ಥಿತಿ ಸುಧಾರಿಸಿಲ್ಲ. ನ್ಯೂಯಾರ್ಕ್ ನಗರದಲ್ಲಿ ಮಾತ್ರ ಸಾವಿನ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಅಮೆರಿಕದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಒಂದು ಲಕ್ಷದ ಹತ್ತಿರ ತಲುಪಿದೆ. ಇದೇ ವೇಳೆ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಕೊರೋನಾದಲ್ಲಿ ಬಲಿಯಾದವರ ಎಲ್ಲರ ಹೆಸರನ್ನು ಮುಖಪುಟದಲ್ಲಿ ಪ್ರಕಟಿಸಿ ನುಡಿ ನಮನ ಸಲ್ಲಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!