Monday, April 12, 2021

ಆಪ್ ನಿಷೇಧ; ಭಾರತದ ನಿರ್ಧಾರ ತೀವ್ರ ಕಳವಳಕಾರಿ ಎಂದ ಚೀನಾ

ಬೀಜಿಂಗ್: 59 ಆಪ್’ಗಳ ನಿಷೇಧ ಕುರಿತಂತೆ ಚೀನಾ ಪ್ರತಿಕ್ರಿಯಿಸಿದ್ದು, ಭಾರತದ ನಿರ್ಧಾರ ತೀವ್ರ ಕಳವಳಕಾರಿ ಎಂದಿದೆ.
ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು-ನಿಬಂಧನೆಗಳನ್ನು ಪಾಲಿಸುವಂತೆ ಚೀನೀ ಸರ್ಕಾರ ಯಾವಾಗಲೂ ಚೀನಿ ಕಂಪನಿಗಳಿಗೆ ಸೂಚನೆಯನ್ನು ನೀಡಿರುತ್ತೇವೆ ಎಂದು ನಾವು ಹೇಳಬಯಸುತ್ತೇವೆ. ಚೀನಾದವರು ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರು ಸ್ಥಳೀಯ ಕಾನೂನುಗಳನ್ನು ಅಗೌರವಿಸುವ ಪ್ರಶ್ನೆಯೇ ಇಲ್ಲ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ.
ಭಾರತ ಕೂಡ ಅಂತಾರಾಷ್ಟ್ರೀಯ ಕಾನೂನುಗಳನ್ನು ಎತ್ತಿ ಹಿಡಿಯುವ ಜವಾಬ್ದಾರಿ ಹೊಂದಿರುತ್ತದೆ. ಈಗ ತೆಗೆದುಕೊಂಡಿರುವ ನಿರ್ಧಾರವನ್ನು ಭಾರತ ಮರುಪರಿಶೀಲಿಸಲಿದೆ ಎಂಬ ನಂಬಿಕೆಯಿದೆ ಎಂದು ಲಿಜಿಯಾನ್ ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ, 59 ಚೀನಾ ಆಪ್ ನಿಷೇಧಿಸಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಚೀನಾದ ವಸ್ತುಗಳ ಮೇಲೂ ನಿಷೇಧ ಹೇರುವಂತೆ ಒತ್ತಾಯ ಕೇಳಿಬಂದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!