newsics.com
ಪಾಕಿಸ್ತಾನ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ.
ಇಸ್ಲಾಮಾಬಾದ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ಬಂಧನಡ ವಾರೆಂಟ್ ಹೊರಡಿಸಿದೆ.
ಮಹಿಳಾ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಕೋರ್ಟ್ ಬಂಧನ ವಾರಂಟ್ ಹೊರಡಿಸಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್ ಖಾನ್ ವಿರುದ್ಧ ಆಗಸ್ಟ್ 20 ರಂದು ದಾಖಲಾದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಮರ್ಗಲ್ಲಾ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ವಾರಂಟ್ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.