Saturday, April 17, 2021

ಕೊರೋನಾ ಹೆಂಡತಿಯಿದ್ದಂತೆ- ಇಂಡೋನೇಷ್ಯಾ ಸಚಿವ ಉವಾಚ!

ಜಕಾರ್ತ: ‘ಕೊರೋನಾ ಹೆಂಡತಿಯಿದ್ದಂತೆ’ ಎಂದು ಇಂಡೊನೇಷ್ಯಾದ ರಕ್ಷಣಾ ಸಚಿವ ಎಂ.ಡಿ. ಮೊಹಮ್ಮದ್‌ ಮಹಫೂದ್‌ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂತಹ ಹೇಳಿಕೆ ಅಧಿಕಾರದಲ್ಲಿರುವವರ ಮಹಿಳಾ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದು ಕೀಳು ಅಭಿರುಚಿಯ ಹೇಳಿಕೆ ಎಂದು ವುಮೆನ್ಸ್‌ ಸಾಲಿಡಾರಿಟಿ ಗ್ರೂಪ್‌ನ ಮುಖ್ಯಸ್ಥೆ ದಿಂಡಾ ನಿಸಾ ಯುರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಕಾರ್ತದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ‘ನನ್ನ ಸಹೋದ್ಯೋಗಿಯೊಬ್ಬರು ಮೀಮ್‌ವೊಂದನ್ನು ಕಳುಹಿಸಿದ್ದರು. ಕೊರೋನಾ ನಿಮ್ಮ ಹೆಂಡತಿ ಇದ್ದಂತೆ. ಮೊದಲು ಆಕೆಯನ್ನು ನಿಯಂತ್ರಿಸಲು ಯತ್ನಿಸಿ, ಇದು ಆಗದ ಕೆಲಸ ಎಂದು ಮನವರಿಕೆಯಾದ ಮೇಲೆ ಆಕೆಯೊಂದಿಗೆ ಹೊಂದಿಕೊಂಡು ಬಾಳುತ್ತೀರಿ. ಅದೇ ರೀತಿ ಕೊರೋನಾ ಜತೆಗೂ ಬದುಕಬೇಕು’ ಎಂದು ಆ ಮೀಮ್‌ನಲ್ಲಿತ್ತು ಎಂದು ಮೊಹಮ್ಮದ್ ಹೇಳಿದ್ದರು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!