Tuesday, April 13, 2021

ವೈಟ್‌ಹೌಸ್ ಬಳಿ ಪ್ರತಿಭಟನೆಗೆ ಯತ್ನ, ಅಶ್ರುವಾಯು ಪ್ರಯೋಗ

ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹ ಹಿಂಸಾಚಾರ ತಕ್ಷಣ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಭಾನುವಾರ ತಡರಾತ್ರಿ ಪ್ರತಿಭಟನಾಕಾರರು ವೈಟ್‌ಹೌಸ್ ಸಮೀಪದ ಪಾರ್ಕ್ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರಿಂದ ಪೊಲೀಸರು ಅಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಉದ್ರಿಕ್ತ ಜನರು ಅಂಗಡಿ‌ಗಳನ್ನು ಲೂಟಿ ಮಾಡುತ್ತಿದ್ದಾರೆ.
ಗಲಭೆಕೋರರನ್ನು ಟ್ರಂಪ್ ಆಡಳಿತವು ದೇಶೀಯ ಭಯೋತ್ಪಾದಕರು ಎಂದು ಕರೆದಿರುವುದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆಗಳು ಹೆಚ್ಚಿವೆ. ವಾಷಿಂಗ್ಟನ್, ಲಾಸ್ ಏಂಜಲೀಸ್, ಹೂಸ್ಟನ್ ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಪ್ರತಿಭಟನೆ ತೀವ್ರಗೊಳ್ಳುತ್ತಿರುವುದರಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈಟ್‌ಹೌಸ್ ನ ಬಂಕರ್ ಪ್ರವೇಶಿಸಿದ್ದು, ಸೀಕ್ರೆಟ್ ಏಜೆಂಟ್‌ರ ಭದ್ರತೆ ಮೂಲಕ ಟ್ರಂಪ್ ತಮ್ಮ ಆಡಳಿತ ನಡೆಸುತ್ತಿದ್ದಾರೆ. ಕಪ್ಪುವರ್ಣಿಯನೆಂದು ತಿಳಿದು ಜಾರ್ಜ್ ಫ್ಲಾಯ್ಡ್ ಎಂಬಾತನನ್ನು ಬಿಳಿಯ ಪೊಲೀಸ್ ಅಧಿಕಾರಿಯೊಬ್ಬ ಕುತ್ತಿಗೆ ಮೇಲೆ ಕಾಲು ಹಾಕಿ ತುಳಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದ್ದೇ ಪ್ರತಿಭಟನೆ ತೀವ್ರಗೊಳ್ಳಲು ಕಾರಣ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!