Tuesday, April 13, 2021

ಪ್ರಧಾನಿ ಮೋದಿ ನಾಯಕತ್ವಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಶ್ಲಾಘನೆ

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ದಿಟ್ಟ ನಿರ್ಧಾರಗಳನ್ನು ಆಸ್ಟ್ರೇಲಿಯಾ ಸ್ವಾಗತಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ಶೃಂಗಸಭೆಯ ಅಂಗವಾಗಿ ವೀಡಿಯೋ ಸಂವಾದದಲ್ಲಿ ಮಾತನಾಡಿದ ಆಸ್ಟ್ರೇಲಿಯಾ ಪ್ರಧಾನಿ  ಮೋರಿಸನ್ ಅವರು, ಮೋದಿ ನಾಯಕತ್ವವನ್ನು ಕೊಂಡಾಡಿದರು. ಉಭಯ ದೇಶಗಳು ನಿಕಟ  ಸಂಬಂಧ ಹೊಂದಿದೆ. ಹಲವು ಕ್ಷೇತ್ರಗಳಲ್ಲಿ ರಚನಾತ್ಮಕ ಕೊಡುಗೆ ನೀಡುತ್ತಿವೆ ಎಂದು ಮೋರಿಸನ್ ಅಭಿಪ್ರಾಯಪಟ್ಟರು.  ವಿಶ್ವ ಆರೋಗ್ಯ ಸಂಘಟನೆಯಲ್ಲಿ ಭಾರತದ ಹೊಸ ಹೊಣೆಗಾರಿಕೆ ಬಗ್ಗೆ ಕೂಡ ಮೋರಿಸನ್   ಪ್ರಸ್ತಾಪಿಸಿದರು. ಪ್ರಸಕ್ತ ಪರಿಸ್ಥಿತಿಯಲ್ಲಿ ವಿಶ್ವದ ಇತರ ರಾಷ್ಟ್ರಗಳಿಗೆ ಇದರಿಂದ ನೆರವಾಗಲಿದೆ ಎಂದು ಹೇಳಿದರು. ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು. ಹಿಂದೂ ಮಹಾ ಸಾಗರದಲ್ಲಿ ಚೀನಾ ತನ್ನ ನೌಕಾ ಬಲ ಹೆಚ್ಚಿಸುತ್ತಿದ್ದು ಇದು ಆಸ್ಟ್ರೇಲಿಯಾದ ಚಿಂತೆಗೆ ಕಾರಣವಾಗಿದೆ. ತಮ್ಮ ಸಂವಾದದ ವೇಳೆ ಮೋರಿಸನ್ ಅವರು ಗುಜರಾತಿನ ಕಿಚಡಿ ಬಗ್ಗೆ ಕೂಡ ಪ್ರಸ್ತಾಪಿಸಿದರು. ಪ್ರಧಾನಿ ನರೇಂದ್ರ ಮೋದಿ ಇದಕ್ಕೆ  ಸ್ಪಂದಿಸಿದರು. ಕಿಚಡಿ ಭಾರತದ ಹಲವು ರಾಜ್ಯಗಳಲ್ಲಿ ವಿವಿಧ ಹೆಸರಿನಲ್ಲಿದೆ., ಅದು ಗುಜರಾತಿಗೆ ಮಾತ್ರ ಸೀಮಿತವಾಗಿಲ್ಲ . ತಮ್ಮ ಕಿಚಡಿ ಹೇಳಿಕೆ ಗುಜರಾತಿಗಳಿಗೆ ಸಂತೋಷ ತರಲಿದೆ ಎಂದು  ಪ್ರಧಾನಿ ಮೋದಿ ಪ್ರತಿಕ್ರಿಯಿಸಿದರು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!