newsics.com
ದುಬೈ: ಭಾರತ ಕ್ರಿಕೆಟ್ ತಂಡದ ಮೆಂಟರ್ , ಮಾರ್ಗದರ್ಶಕರಾಗಿ ನೇಮಕಗೊಂಡಿರುವ ಮಹೇಂದ್ರ ಸಿಂಗ್ ಧೋನಿಯನ್ನು ತಂಡಕ್ಕೆ ಸ್ವಾಗತಿಸುವ ಚಿತ್ರವನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
ಟಿ- 20 ವಿಶ್ವಕಪ್ ಪಂದ್ಯದಲ್ಲಿ ಭಾಗವಹಿಸಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಧೋನಿ ಮಾರ್ಗದರ್ಶನ ನೀಡಲಿದ್ದಾರೆ. ಇದಕ್ಕಾಗಿ ಧೋನಿ ಯಾವುದೇ ಹಣ ಪಡೆಯುತ್ತಿಲ್ಲ ಎಂದು ಬಿಸಿಸಿಐ ಹೇಳಿದೆ.
ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ತಮ್ಮ ಅನುಭವವನ್ನು ಕಿರಿಯ ಆಟಗಾರರಿಗೆ ಧಾರೆ ಎರೆಯಲಿದ್ದಾರೆ.